Friday, Mar 29 2024 | Time 12:51 Hrs(IST)
Karnataka Share

ಬರ ಪರಿಹಾರ ಕಾಮಗಾರಿ ಸಮರೋಪಾದಿಯಲ್ಲಿ ನಡೆಸಲು ಡಿಸಿಗಳಿಗೆ ಮುಖ್ಯ ಕಾರ್ಯದರ್ಶಿ ಸೂಚನೆ

ಬರ ಪರಿಹಾರ ಕಾಮಗಾರಿ ಸಮರೋಪಾದಿಯಲ್ಲಿ ನಡೆಸಲು ಡಿಸಿಗಳಿಗೆ ಮುಖ್ಯ ಕಾರ್ಯದರ್ಶಿ ಸೂಚನೆ
ಬರ ಪರಿಹಾರ ಕಾಮಗಾರಿ ಸಮರೋಪಾದಿಯಲ್ಲಿ ನಡೆಸಲು ಡಿಸಿಗಳಿಗೆ ಮುಖ್ಯ ಕಾರ್ಯದರ್ಶಿ ಸೂಚನೆ

ಬೆಂಗಳೂರು, ಜೂ 24 (ಯುಎನ್ಐ) ರಾಜ್ಯದಲ್ಲಿ ಮಳೆ ಕೊರತೆ ಹಿನ್ನೆಲೆ ಬರಪರಿಹಾರ ಕಾಮಗಾರಿಗಳನ್ನು ತ್ವರಿತವಾಗಿ ಕೈಗೊಂಡು ಸಮರೋಪಾದಿಯಲ್ಲಿ ಕೆಲಸ ಆರಂಭಿಸುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿ ವಿಜಯಭಾಸ್ಕರ್ ಅವರು ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ

ವಿಧಾನಸೌಧದ ಸಮಿತಿ ಕೊಠಡಿಯಲ್ಲಿಂದು ಜಿಲ್ಲಾಧಿಕಾರಿಗಳ ಜೊತೆ ನಡೆಸಿದ ವಿಡಿಯೋ ಕಾನ್ಫರೆನ್ಸ್ ನಲ್ಲಿ ಅವರು ಈ ಸೂಚನೆ ನೀಡಿದ್ದಾರೆ

ಸತತ ಬರಗಾಲದಿಂದ ರಾಜ್ಯದ ಬಹುತೇಕ ಕಡೆ ಕುಡಿಯುವ ನೀರಿನ ಸಮಸ್ಯೆ, ಉದ್ಯೋಗದ ಕೊರತೆ, ರೈತರ ಸಮಸ್ಯೆ ಸೇರಿದಂತೆ ಹಲವು ಸಮಸ್ಯೆಗಳು ತಲೆದೋರಿವೆ, ಕಳೆದ ವಾರ ಈ ಸಂಬಂಧ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮತ್ತು ಜಿಲ್ಲಾಧಿಕಾರಿಗಳೊಂದಿಗೆ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಸಭೆ ನಡೆಸಿ, ಬರ ಪರಿಹಾರ ಕಾಮಗಾರಿಗಳನ್ನು ತ್ವರಿತವಾಗಿ ಕೈಗೊಳ್ಳುವಂತೆ ಸೂಚಿಸಿದ್ದರು, ಈ ವಿಷಯದಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಜವಾಬ್ದಾರಿ ವಹಿಸಿಕೊಳ್ಳುವಂತೆ ಸೂಚಿಸಿದ್ದರು, ಕುಮಾರಸ್ವಾಮಿ ಅವರ ನಿರ್ದೇಶನದ ಮೇರೆಗೆ ಜಿಲ್ಲಾಧಿಕಾರಿಗಳೊಂದಿಗೆ ವಿಜಯಭಾಸ್ಕರ್ ಇಂದು ಸಭೆ ನಡೆಸಿದ್ದಾರೆ

ಬರಪರಿಹಾರ ಕಾಮಗಾರಿಗಾಗಿ ಈಗಾಗಲೇ ರೂಪಿಸಲಾಗಿರುವ ಮಾರ್ಗಸೂಚಿಗಳನ್ನು ಕಟ್ಟು ನಿಟ್ಟಾಗಿ ಪಾಲಿಸಬೇಕು. ಬರಗಾಲದ ಜತೆ ಕೆಲವು ಜಿಲ್ಲೆಗಳಲ್ಲಿ ಎದುರಾಗಬಹುದಾದ ಅತಿವೃಷ್ಟಿಯ ಆತಂಕವನ್ನು ಎದುರಿಸಲೂ ಸಜ್ಜಾಗಬೇಕು ಎಂದು ಮುಖ್ಯಕಾರ್ಯದರ್ಶಿ ಸೂಚಿಸಿದ್ದಾರೆ

ಯಾವುದೇ ಕಾರಣಕ್ಕೂ ಜನರಿಗೆ ತೊಂದರೆಯಾಗದಂತೆ ನೋಡಿಕೊಳ್ಳಬೇಕು, ಜನ, ಜಾನುವಾರಗಳ ಹಿತ ರಕ್ಷಿಸಲು ಅಧಿಕಾರಿಗಳು ಮುಂದಾಗಬೇಕೆಂದು ಅವರು ಹೇಳಿದ್ದಾರೆ

ಬರ ಪರಿಹಾರ ಕಾಮಗಾರಿಯನ್ನು ಕೇವಲ ಒಂದು ಕಾರ್ಯಕ್ರಮ ಎಂಬಂತೆ ಪರಿಗಣಿಸಬಾರದು‌, ಜನರ ಸಮಸ್ಯೆ ಆಲಿಸಲು ಮುಖ್ಯಮಂತ್ರಿಗಳೇ ಬರಬೇಕು ಎಂಬ ಭಾವನೆ ಜನರಲ್ಲಿ ಮೂಡುತ್ತಿದೆ. ಈ ರೀತಿಯ ಸನ್ನಿವೇಶ ಸೃಷ್ಟಿಯಾಗದಂತೆ ಕ್ರಮವಹಿಸಬೇಕು ಎಂದು ಅವರು ಹೇಳಿದರು

ಗ್ರಾಮವಾಸ್ತವ್ಯ ನಡೆಸುವ ಮೂಲಕ ಖುದ್ದು ಮುಖ್ಯಮಂತ್ರಿಗಳೇ ಜನರ ಬಳಿ ಹೊರಟಿದ್ದಾರೆ‌. ಹೀಗಾಗಿ ಜನರ ಜೊತೆ ಅಧಿಕಾರಿಗಳು ಬೆರೆತು ಅವರ ಸಮಸ್ಯೆಗಳನ್ನು ತಳಮಟ್ಟದಲ್ಲೇ ಪರಿಹರಿಸಬೇಕು ಎಂದು ಸಭೆಯಲ್ಲಿ ಮುಖ್ಯ ಕಾರ್ಯದರ್ಶಿಗಳು ತಿಳಿಸಿದ್ದಾರೆ

ಯುಎನ್ಐ ಯುಎಲ್ ಎಎಚ್ 1058

There is no row at position 0.